-->

A gift to his father , a short story

ತುಂಬಾ ಬಡತನದಲ್ಲಿ ಬೆಳೆದ *ಒಬ್ಬ ಆರ್ಡಿನರಿ ಅಂಚೆ ಕಚೇರಿಯ ಉದ್ಯೋಗಿ*. ತನ್ನ ಇಬ್ಬರು ಮಕ್ಕಳನ್ನು ಚೆನ್ನಾಗಿ ಓದಿಸಿ ಉದ್ಯೋಗಸ್ಥರನ್ನಾಗಿ ಮಾಡಿ *ವಿದೇಶಗಳಲ್ಲಿ ವಾಸ್ತವ್ಯ ಹೂಡುವ ಹಾಗೇ ಮಾಡಿದ.*

ಇಬ್ಬರು ಮಕ್ಕಳಿಗೆ ಮದುವೆಯಾಗಿ ಮಕ್ಕಳಾದವು .ಇಬ್ಬರೂ ಸುಖೀ ಸಂಸಾರಸ್ಥರೇ. ಆದರೆ ತಂದೆಗೆ ಊರಿಂದೂರಿಗೆ ವರ್ಗಾವಣೆಗಳಾಗುತ್ತಾ ಕೊನೆಗೆ ಆಂದ್ರಪ್ರದೇಶದ ಚಿಂತಲಪಲ್ಲಿ ಎಂಬ ಕಚೇರಿಯಲ್ಲಿ ನಿವೃತ್ತಿ ಸ್ಥಾನಕ್ಕೆ ಬಂದು ನಿಂತರು.
ನಿವೃತ್ತಿಯು ಆಯಿತು, ಈಗ ಅಪ್ಪನಿಗೆ ಚಿಂತೆ.

 ಮಕ್ಕಳಿಗೆ ಫೋನಾಯಿಸುತ್ತಾರೆ *"ಒಂದೆರಡು ದಿನ ಊರಿಗೆ ಬಂದುಹೋಗಲು ಸಾಧ್ಯವೇ" ಎಂದು.?*

 ಮಕ್ಕಳು ಸಹ ಒಪ್ಪುತ್ತಾರೆ .ಆದರೆ ಮಕ್ಕಳು *ಒಂದೆರಡು ದಿನವಲ್ಲದೆ ಒಂದು ತಿಂಗಳು ರಜೆ ಮಾಡಿ ಊರಿಗೆ ಬರುತ್ತಾರೆ.*

ಬಂದ ಮಕ್ಕಳಿಗೆ ತಂದೆ ಹೇಳುತ್ತಾರೆ "ನಿಮಗೊಂದು ವಿಷಯ ತಿಳಿಸಬೇಕಿದೆ "ಎಂದು.

*"ನನ್ನ ನಿವೃತ್ತಿಯಾಗಿದೆ. ಹಾಗೆಯೇ ನನ್ನ ಖಾತೆಗೆ ಒಂದಷ್ಟು ಲಕ್ಷ ಪಿ ಎಫ್ ಹಣವು ಬಂದಿದೆ. ನೀವಿಬ್ಬರು ಆ ಹಣವನ್ನು ಹಂಚಿಕೊಂಡರೆ ನಾನು ನನ್ನ ಪೆನ್ಶನ್  ಹಣದಲ್ಲಿ ನಿಮ್ಮ ತಾಯಿಯನ್ನು ಸಾಕಬಲ್ಲೆ. ಈ ಸುದ್ದಿ ಹೇಳಲಿಕ್ಕೆಂದೇ ನಿಮ್ಮನ್ನು ಕರೆಸಿದೆ ಎಂದು ಮತ್ತೆ ಒಂದೆರಡು ದಿನ ಒಟ್ಟಿಗೆ ಎಲ್ಲರೂ ಎಲ್ಲಾದರೂ ಸುತ್ತಿ ಬರೋಣವೆಂದು" ಇಚ್ಛೆ ವ್ಯಕ್ತಪಡಿಸುತ್ತಾರೆ*.

 ಅದಕ್ಕೆ ಮಕ್ಕಳು ಹೇಳುತ್ತಾರೆ
"ಮೊದಲ ಸಲ ಕೆಲಸ ಮಾಡಿದ ಅಂಚೆ ಕಚೇರಿಯಾದ *ಉಡುಪಿಯ ಹಿತ್ತಲುಮನೆ ಎಂಬ ಗ್ರಾಮಕ್ಕೆ ಹೋಗಿ ಬರೋಣ"* ಎಂದು ಹೇಳುತ್ತಾರೆ,

ತಂದೆಗೆ ಆಶ್ಚರ್ಯ ಆ ಗ್ರಾಮದ್ಲಲೇನಿದೆ ಎಂದು ಆದರೂ ಮಕ್ಕಳಿಗೆ ನಿರಾಸೆಗೊಳಿಸದೆ ಹೊರಟುನಿಲ್ಲುತ್ತಾರೆ.

A gift to his father , a short story


ಆ ಗ್ರಾಮದಲ್ಲಿ ಮೊದಲು ಕೆಲಸ ಮಾಡುವ ಸಮಯದಲ್ಲಿ ವಾಸ್ತವ್ಯ ಹೂಡಿದ್ದ *ಗುಡಿಸಲು ಚೊಕ್ಕವಾದ ಮನೆ. ತನ್ನ* *ಮಕ್ಕಳು ಆಟವಾಡಿದ್ದ ಅಂಗಳ ಹಸಿರುಮಯವಾಗಿದೆ. ಆಗ* *ನೆಟ್ಟ ಸಸಿಗಳು ಮರಗಳಾಗಿವೆ. ತೆಂಗಿನ ಮರ ತುಂಬಾ ಕಾಯಿಗಳಿವೆ. ಎತ್ತ ನೋಡಿದರು ಹಸಿರು ಮನೆಯ ಕಂಪೌಂಡಿನ* *ಒಳಗೆ ಪರಿಶುದ್ಧ ತುಳಸಿ ಗಿಡ ಗೇಟು* *ಪ್ರವೇಶಿಸುವಷ್ಟರಲ್ಲಿ ಒಬ್ಬ ಆಳು ಬಂದು ಗೇಟಿನ ಬೀಗದ ಕೀಲಿ*
*ಮಗನ ಕೈ ಗೆ ಇಡುತ್ತಾನೆ*. *ಮಗ ಬೀಗ ತೆಗೆದು ಒಳ ಬಂದಾಗ ತಂದೆಗೆ ಎಲ್ಲವೂ ಅಯೋಮಯ ಈ ಆಳು ಯಾರು, ಈ ಮನೆಗೆ ಏಕೆ ಬಂದೆವು,  ಎಲ್ಲವೂ ನಿಗೂಢವೇ...*

ಮನೆಯ ಒಳಗೆ ಬರುವಷ್ಟರಲ್ಲಿ ಎಲ್ಲವೂ ಸ್ವಚ್ಛಂದ ಸ್ವಚ್ಛಂದ...

ತಂದೆ ಏನೋ ಕೇಳಲು ಬರುವಷ್ಟರಲ್ಲಿ ಮಕ್ಕಳೇ ಮಾತನಾಡಲು ಶುರು ಮಾಡುತ್ತಾರೆ *"ಅಪ್ಪ.... ನಿಮ್ಮ ನಿವೃತ್ತಿ ಹತ್ತಿರವಿದೆಯೆಂದು ತಿಳಿಯಿತು .ಈ ಸ್ಥಳ ನಿಮಗೆ ತುಂಬಾ ಇಷ್ಟವೆಂದು ಒಂದು ವರ್ಷದ ಹಿಂದೆ ಈ ಸ್ಥಳವನ್ನು ನಾವೇ ಕೊಂಡುಕೊಂಡಿದ್ದೇವೆ. ವರ್ಗಾವಣೆಗಳಿಂದ ಬಸವಳಿದಿದ್ದೀರಿ*
*ಸಾಕು ನಿಮ್ಮ ನೆಮ್ಮದಿಗೆ ಒಂದು ಮನೆ ಇರಬೇಕು ಎಂದು ನಿಮಗೆ ತಿಳಿಸದೆ ನಾವಿಬ್ಬರು ಬಂದು ಇಲ್ಲಿ ಎಲ್ಲವೂ ಸರಿಪಡಿಸಿ ಹೋದೆವು ನಿಮ್ಮ*
*ಪಿ ಎಫ್ ಹಣ ಖಾತೆಯಲ್ಲೇ ಇರಲಿ ನಮ್ಮನ್ನು ಬಡತನದಲ್ಲಿ ಓದಿಸಿದಿರಿ ,ಬೆಳೆಸಿದಿರಿ ನಾವು ಈಗ ಸದೃಢರಾಗಿದ್ದೇವೆ .ನಮ್ಮ ಮಕ್ಕಳನ್ನು ನಿಮ್ಮಲ್ಲಿಯೇ* *ಬಿಟ್ಟು ಹೋಗುತ್ತೇವೆ. ಅವರು ನಿಮ್ಮ ಅಡಿಯಲ್ಲಿ ಬೆಳೆದರೆ ನಮ್ಮ ಸಂಸ್ಕೃತಿ* *ಸಂಪ್ರದಾಯಗಳು ಅವರಿಗೂ ತಿಳಿಯುತ್ತದೆ.*
*ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ನಿಮ್ಮ ಆರೋಗ್ಯದ ಕಡೆ ಗಮನ* *ಕೊಡಿ .ಮೊಮ್ಮಕ್ಕಳನ್ನು ಓದಿಸಿ ಕೆಲಸಕ್ಕೆಂದು ಆಳು ಇದ್ದಾನೆ. ಪ್ರತಿ ತಿಂಗಳು ಅವನ* *ಸಂಬಳವನ್ನು ಅವನ ಖಾತೆಗೆ ತುಂಬುತ್ತೇವೆ .ನಮ್ಮ ಮನೆಯ ಪಕ್ಕದಲ್ಲೇ ಅವನಿಗೂ* *ವಾಸ್ತವ್ಯವಿದೆ. ವರ್ಷಕ್ಕೊಮ್ಮೆ ತಪ್ಪದೆ ಬಂದುಹೋಗುತ್ತೇವೆ. ಎಂದು ಹೇಳುವಷ್ಟರಲ್ಲಿ*
*ಅಪ್ಪನ ಕಣ್ಣಾಲಿಗಳು ತುಂಬಿ, ಮೂಕಪ್ರೇಕ್ಷಕರಾಗಿ*
*ಬಿಟ್ಟರು. ಪ್ರತಿಯೊಬ್ಬ ಮಕ್ಕಳು ಇದೇ ತರಹ ನಡೆದುಕೊಂಡರೆ ಸಮಾಜದಲ್ಲಿ ವ್ರದ್ಧಾಶ್ರಮಗಳ ಅಗತ್ಯತೆ ಉದ್ಭವಿಸುವುದಿಲ್ಲ.*

Terms | Privacy | 2024 🇮🇳
–>